ರಂಗ ಬಾರೋ ರಂಗ ಬಾರೋ ರಂಗಯ್ಯ ಬಾರೋ

ರಂಗ ಬಾರೋ ರಂಗ ಬಾರೋ ರಂಗಯ್ಯ ಬಾರೋ


 ರಂಗ ಬಾರೋ ರಂಗ ಬಾರೋ ರಂಗಯ್ಯ ಬಾರೋ ||ಪ || 
 ಪೊನ್ನುಂಗುರ ನಿನಗೀವೆ ಪನ್ನಗಶಯನನೆ ಬಾರೋ ||ಅ ||  

  ವೆಂಕಟರಮಣನೆ ಬಾರೋ ಪಂಕಜಚರಣವ ತೋರೋ 
 ಮುಕುಂದ ಮುಂದೆ ನಿಂದಾಡೋ ಕಿಂಕಿಣಿಕಿಣಿರವದಿಂದ ||  

  ಕರ್ಣದೊಳಿಟ್ಟ ಮಾಗಾಯಿ ಹೊನ್ನ ಕದಪಿಲಿ ಧುಮುಕಾಡುತ್ತ 
 ಪನ್ನಗಶಯನನೆ ನಿನ್ನ ಚಿನ್ನದ ಸರ ಹೊಳೆವುತ್ತ ಬಾರೋ ||  

  ಬಡನಡುವಿನ ಘಂಟೆ ಬಳುಕಿ ಢಣಢಣಿಸುತ್ತ 
 ಕಡಗ ಕಾಲಂದುಗೆ ಗೆಜ್ಜೆ ಅಡಿಗಡಿಗೆ ನುಡಿಸುತ್ತ ಬಾರೋ ||  

  ಮಂಗುರುಳಿನ ಸೊಬಗಿನಿಂದ ರಂಗ ನಿನ್ನ ಪಣೆಯೊಳಿಟ್ಟ 
 ರಂಗು ಮಾಣಿಕ್ಯದರಳೆಲೆ ತೂಗಿ ತೂಗಿ ಓಲಾಡುತ್ತ ಬಾರೋ ||  

  ಕೊರಳಿಗ್ಹಾಕಿದ ಹುಲಿಯುಗುರು ತೋರಮುತ್ತಿನ ಹಾರಂಗಳ್ಹೊಳೆಯುತ್ತ 
 ಪರಿಪರಿ ವಿಧಗಳಿಂದ ಪುರಂದರವಿಠಲ ಬಾರೋ || 

Comments