ಭಗವದ್ಗೀತೆ ಅಧ್ಯಾಯ-1 ಶ್ಲೋಕ - 37 -38

ಭಗವದ್ಗೀತೆ ಅಧ್ಯಾಯ-1 ಶ್ಲೋಕ - 37
 
ಶ್ಲೋಕ :
ಯದ್ಯಪ್ಯೇತೇ ನ ಪಶ್ಯಂತಿ ಲೋಭೋಪಹತಚೇತಸಃ ।
ಕುಲಕ್ಷಯಕೃತಂ ದೋಷಂ ಮಿತ್ರದ್ರೋಹೇ ಚ ಪಾತಕಮ್ ॥೩೮॥
 
ಅರ್ಥ :
ಇವರೆಲ್ಲರ ಹೃದಯ ಲೋಭದ ವಶವಾಗಿದೆ. ಕುಲದ ಅಳಿವಿನಿಂದಾಗುವ ಮತ್ತು ಮಿತ್ರ ದ್ರೋಹದಿಂದಾಗುವ ಪಾತಕವನ್ನು ಇವರು ಕಾಣುತ್ತಿಲ್ಲ.
 
ವಿವರ ವಿವರಣೆಗಳು
ದುಡ್ಡಿನ ಆಸೆಯಿಂದ, ಲೋಭದಿಂದ ಕುರುಡಾಗಿ ಅವರ ಮನಸ್ಸು ಯೋಚಿಸುವ ಶಕ್ತಿಯನ್ನು ಕಳೆದುಕೊಂಡಿದೆ. ಇದರಿಂದ ಕುಲಕ್ಷಯವಾಗುತ್ತದೆ. ಇಡೀ ಭರತವಂಶ ನಿರ್ವಂಶವಾಗುತ್ತದೆ. ಬಂಧುಗಳಾದ ನಾವು ಒಬ್ಬರಿಗೊಬ್ಬರು ಮಿತ್ರರಂತೆ ಆತ್ಮೀಯತೆಯಿಂದ ಬದುಕಬೇಕಿತ್ತು. ಆದರೆ ಒಬ್ಬರನೊಬ್ಬರು ದ್ವೇಷಿಸುತ್ತಿದ್ದೇವೆ. ಇದು ದ್ರೋಹ.

ಇಲ್ಲಿ ‘ಮಿತ್ರ’ ಎನ್ನುವ ಪದ ಬಳಕೆಯಾಗಿದೆ. ಯಾರು ನಿಜವಾದ ಮಿತ್ರ? ನಮಗೆ ಯಾವಾಗ ಆಪತ್ತು ಬಂದೀತು ಎಂದು ನಮಗಿಂತ ಮೊದಲೇ ಊಹಿಸಿ, ಪೂರ್ವಭಾವಿಯಾಗಿ ಯಾವುದೇ ಪ್ರತಿಫಲವನ್ನು ಅಪೇಕ್ಷಿಸದೆ, ಜೀವಕ್ಕೆ ಜೀವ ಕೊಡುವವನು ‘ಮಿತ್ರ’.

_____________________________________________

ಭಗವದ್ಗೀತೆ ಅಧ್ಯಾಯ-1 ಶ್ಲೋಕ - 38
 
ಶ್ಲೋಕ :
ಯದ್ಯಪ್ಯೇತೇ ನ ಪಶ್ಯಂತಿ ಲೋಭೋಪಹತಚೇತಸಃ ।
ಕುಲಕ್ಷಯಕೃತಂ ದೋಷಂ ಮಿತ್ರದ್ರೋಹೇ ಚ ಪಾತಕಮ್ ॥೩೮॥
 
ಅರ್ಥ:
ಇವರೆಲ್ಲರ ಹೃದಯ ಲೋಭದ ವಶವಾಗಿದೆ. ಕುಲದ ಅಳಿವಿನಿಂದಾಗುವ ಮತ್ತು ಮಿತ್ರ ದ್ರೋಹದಿಂದಾಗುವ ಪಾತಕವನ್ನು ಇವರು ಕಾಣುತ್ತಿಲ್ಲ.
 
ವಿವರ ವಿವರಣೆಗಳು : 

Comments